Thu. Dec 9th, 2021

ಎಸ್‌ಎಸ್‌ಎಲ್‌ಸಿ ಮತ್ತು ಹೈಯರ್ ಸೆಕೆಂಡರಿ ಪರೀಕ್ಷೆಗಳ ವೇಳಾಪಟ್ಟಿ ಸಿದ್ಧ : ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ನಿರ್ಧಾರ

ಈ ತಿಂಗಳ 26 ರಿಂದ 30 ರವರೆಗೆ ಪರೀಕ್ಷೆಗಳನ್ನು ನಡೆಸಲು ಶಿಕ್ಷಣ ಇಲಾಖೆ ತೀರ್ಮಾನ

ತಿರುವನಂತಪುರ : ಕೇರಳದಲ್ಲಿ  ಎಸ್‌ಎಸ್‌ಎಲ್‌ಸಿ ಮತ್ತು ಹೈಯರ್ ಸೆಕೆಂಡರಿ ಪರೀಕ್ಷೆಯನ್ನು ಈ ತಿಂಗಳ  26 ರಿಂದ ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದೆ. ಈ ಬಗ್ಗೆ ಕ್ಯಾಬಿನೆಟ್ ಸಭೆಯಲ್ಲಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು.

ಈ ತಿಂಗಳು 26 ರಿಂದ 30 ರವರೆಗೆ ಪರೀಕ್ಷೆಗಳನ್ನು ನಡೆಸಲು ಶಿಕ್ಷಣ ಇಲಾಖೆ ನಿರ್ಧರಿಸಿದ್ದು, ಹೈಯರ್ ಸೆಕೆಂಡರಿ ಪರೀಕ್ಷೆ ಬೆಳಿಗ್ಗೆ ಮತ್ತು ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಧ್ಯಾಹ್ನ ನಡೆಯಲಿದೆ ಎಂದು ತಿರ್ಮಾನಿಸಲಾಗಿದ್ದು , ಇದಕ್ಕಾಗಿ ವೇಳಾಪಟ್ಟಿಯನ್ನು ಸಿದ್ಧಪಡಿಸಲಾಗಿದೆ. ಈ ಕುರಿತು ಕ್ಯಾಬಿನೆಟ್  ಸಭೆಯಲ್ಲಿ ಚರ್ಚೆ ನಡೆದ ನಂತರವೇ ಅಂತಿಮ ತೀರ್ಮಾನ ತೆಗೆದುಕೊಳ್ಳಲಾಗುವುದು.

Play Video