Thu. Dec 9th, 2021

ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ, ಮಾಜಿ ಭೂಗತ ದೊರೆ ಮುತ್ತಪ್ಪ ರೈ ವಿಧಿವಶ

ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಮುತ್ತಪ್ಪ ರೈ .

ಬೆಂಗಳೂರು: ಜಯಕರ್ನಾಟಕ ಸಂಘಟನೆಯ ಸಂಸ್ಥಾಪಕ ಅಧ್ಯಕ್ಷ, ಮಾಜಿ ಭೂಗತ ದೊರೆ ಮುತ್ತಪ್ಪ ರೈ ವಿಧಿವಶರಾಗಿದ್ದಾರೆ. ಇವರಿಗೆ 68 ವರ್ಷ ವಯಸ್ಸಾಗಿತ್ತು.

ಕಳೆದ ಕೆಲ ವರ್ಷಗಳಿಂದ ಕ್ಯಾನ್ಸರ್ ನಿಂದ ಬಳಲುತ್ತಿದ್ದರು ಮುತ್ತಪ್ಪ ರೈ . ಅವರ ಆರೋಗ್ಯ ಪರಿಸ್ಥಿತಿ ಚಿಂತಾಜನಕವಾಗಿತ್ತು , ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಯಲ್ಲಿ ವೆಂಟಿಲೇಟರ್ ಮೇಲೆ ಇರಿಸಿ ಚಿಕಿತ್ಸೆ ನೀಡಲಾಗುತ್ತಿತ್ತು. ಇಂದು ಮುಂಜಾನೆ ಸುಮಾರು 210 ಕ್ಕೆ ಮೃತಪಟ್ಟಿದ್ದಾರೆ . ಬೆಂಗಳೂರಿನ ಮಣಿಪಾಲ್ ಆಸ್ಪತ್ರೆ ಬಳಿ ಪೊಲೀಸ್ ಭದ್ರತೆ ಕಲ್ಪಿಸಲಾಗಿದೆ.

ಬೆಂಗಳೂರಿನ ಬಿಡದಿಯಲ್ಲಿ ಇಂದು ಸಂಜೆ ಅಂತ್ಯಕ್ರಿಯೆ ನಡೆಯಲಿದೆ.

Play Video